Hebrews 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
Kannada BSI Bible 2016
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.
Kannada Bible (KNCL) BSI 2016
ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.