Hebrews 9:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Kannada BSI Bible 2016
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕವಸ್ತುಗಳಿಗೆ ಪ್ರತಿರೂಪವಾಗಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಸಾಕ್ಷಾತ್ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
Kannada Bible (KNCL) BSI 2016
ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.