Hebrews 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
Kannada BSI Bible 2016
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
Kannada Bible (KNCL) BSI 2016
ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.