Hebrews 9:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
Kannada BSI Bible 2016
ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;
Kannada Bible (KNCL) BSI 2016
ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.