Hebrews 9:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Kannada BSI Bible 2016
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Kannada Bible (KNCL) BSI 2016
ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.