Hebrews 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
Kannada BSI Bible 2016
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;
Kannada Bible (KNCL) BSI 2016
ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.