Hebrews 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿ ಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
Kannada BSI Bible 2016
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.
Kannada Bible (KNCL) BSI 2016
ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.