Hebrews 9:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
Kannada BSI Bible 2016
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
Kannada Bible (KNCL) BSI 2016
ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.