Hebrews 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
Kannada BSI Bible 2016
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
Kannada Bible (KNCL) BSI 2016
ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ