Hosea 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
Kannada BSI Bible 2016
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
Kannada Bible (KNCL) BSI 2016
ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.