Hosea 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.
Kannada BSI Bible 2016
ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.
Kannada Bible (KNCL) BSI 2016
ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.