Hosea 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವಿ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.
Kannada BSI Bible 2016
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.
Kannada Bible (KNCL) BSI 2016
ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.