Hosea 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.
Kannada BSI Bible 2016
ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ; ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ ನಿಮ್ಮ ಶೂರರ ಬಾಹುಳ್ಯದಲ್ಲಿಯೂ ಭರವಸವಿಟ್ಟದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.
Kannada Bible (KNCL) BSI 2016
ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.