Hosea 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
Kannada BSI Bible 2016
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
Kannada Bible (KNCL) BSI 2016
ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ