Hosea 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.
Kannada BSI Bible 2016
ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ; ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹಸ್ತಂಭಗಳನ್ನು ಹಾಳುಮಾಡುವನು.
Kannada Bible (KNCL) BSI 2016
ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.