Hosea 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.
Kannada BSI Bible 2016
ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು.
Kannada Bible (KNCL) BSI 2016
ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.