Hosea 11:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
Kannada BSI Bible 2016
ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.