Hosea 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
Kannada BSI Bible 2016
ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
Kannada Bible (KNCL) BSI 2016
“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.