Hosea 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
Kannada BSI Bible 2016
ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
Kannada Bible (KNCL) BSI 2016
ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.