Hosea 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
Kannada BSI Bible 2016
ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.
Kannada Bible (KNCL) BSI 2016
ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.