Hosea 11:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
Kannada BSI Bible 2016
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.
Kannada Bible (KNCL) BSI 2016
ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.