Hosea 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.
Kannada BSI Bible 2016
ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು.
Kannada Bible (KNCL) BSI 2016
ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.