Hosea 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
Kannada BSI Bible 2016
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.
Kannada Bible (KNCL) BSI 2016
“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.