Hosea 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.
Kannada BSI Bible 2016
ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.
Kannada Bible (KNCL) BSI 2016
“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.