Hosea 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
Kannada BSI Bible 2016
ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದಕ್ಕೆ ಕಟ್ಟಿ ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
Kannada Bible (KNCL) BSI 2016
ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.