Hosea 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
Kannada BSI Bible 2016
ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.
Kannada Bible (KNCL) BSI 2016
ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.