Hosea 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
Kannada BSI Bible 2016
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;
Kannada Bible (KNCL) BSI 2016
ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.