Hosea 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
Kannada BSI Bible 2016
ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
Kannada BSI JV (ಕನ್ನಡ ಸತ್ಯವೇದವು J.V. (BSI))
[ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
Kannada Bible (KNCL) BSI 2016
ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.