Hosea 12:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
Kannada BSI Bible 2016
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?
Kannada Bible (KNCL) BSI 2016
ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”