Hosea 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.
Kannada BSI Bible 2016
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು.
Kannada Bible (KNCL) BSI 2016
ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.