Hosea 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
Kannada BSI Bible 2016
ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
Kannada Bible (KNCL) BSI 2016
ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”