Hosea 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
Kannada BSI Bible 2016
ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.
Kannada Bible (KNCL) BSI 2016
ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.