Hosea 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.
Kannada BSI Bible 2016
ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.
Kannada Bible (KNCL) BSI 2016
ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.