Hosea 14:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
Kannada BSI Bible 2016
ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
Kannada Bible (KNCL) BSI 2016
ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ\. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”