Hosea 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
Kannada BSI Bible 2016
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.
Kannada Bible (KNCL) BSI 2016
ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.