Hosea 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
Kannada BSI Bible 2016
ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
Kannada Bible (KNCL) BSI 2016
‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.