Hosea 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”
Kannada BSI Bible 2016
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.