Hosea 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು. ”
Kannada BSI Bible 2016
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.
Kannada Bible (KNCL) BSI 2016
ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.