Hosea 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವು ಯೆಹೋವನ ಮಾತುಗಳು. “ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವಿ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ ’ ಅನ್ನದೆ ‘ಈಶೀ ’ ಅನ್ನುವಿ.
Kannada BSI Bible 2016
ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.