Hosea 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.
Kannada BSI Bible 2016
ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.