Hosea 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.
Kannada BSI Bible 2016
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;
Kannada Bible (KNCL) BSI 2016
ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.