Hosea 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
Kannada BSI Bible 2016
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ಬೇಕುಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
Kannada Bible (KNCL) BSI 2016
ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.