Hosea 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
Kannada BSI Bible 2016
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
Kannada Bible (KNCL) BSI 2016
ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.