Hosea 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.
Kannada BSI Bible 2016
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;
Kannada Bible (KNCL) BSI 2016
ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.