Hosea 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.
Kannada BSI Bible 2016
ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂಳೆಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವದಿಲ್ಲ; ನೀವೇ ಸೂಳೆಯರನ್ನು ಕರಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.
Kannada Bible (KNCL) BSI 2016
ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.