Hosea 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
Kannada BSI Bible 2016
ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.
Kannada Bible (KNCL) BSI 2016
“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.