Hosea 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.
Kannada BSI Bible 2016
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.
Kannada Bible (KNCL) BSI 2016
ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.