Hosea 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.
Kannada BSI Bible 2016
ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,
Kannada Bible (KNCL) BSI 2016
ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಹೇಗೋ ಹಾಗೆಯೇ ಜನರು ಇರುವರು. ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು.