Hosea 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
Kannada BSI Bible 2016
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
Kannada Bible (KNCL) BSI 2016
“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.