Hosea 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.
Kannada BSI Bible 2016
ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.
Kannada Bible (KNCL) BSI 2016
“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.